ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ 25 ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
2047ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಒಂದು ತಿಂಗಳ ಕಾಲ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಯೋಜನೆಯ ಭಾಗವಾಗಿ ಈ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು, ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪರಿಶ್ರಮ ಹಾಗೂ ಕೊಡುಗೆಯ ಮಹತ್ವವನ್ನು ತಿಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ.
ಸೆ. 12ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಗುಂಡ್ಯದಲ್ಲಿ ಬೀದಿ ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ನಾಟಕದ ಮೊದಲ ಪ್ರದರ್ಶನವೂ ನಡೆಯಿತು.
ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೆದಪ್ಪ, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಮತ್ತು ಪ್ರಸನ್ನ ಮಾರ್ತ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ರೈ ಮನವಳಿಕೆ ಮತ್ತು ವಿನಯ್ ಕಂದಡ್ಕ, ವಿಕಾಸ್ ಪುತ್ತೂರು, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಇದಲ್ಲದೆ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು,ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು
ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ: ವಿಕಸಿತ ಭಾರತ ಸಂಕಲ್ಪದ ಜಾಗೃತಿಗೆ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ













