ಪಂಜ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಆರಂಭ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.11ರಂದು ಆರಂಭಗೊಂಡಿದ್ದು, ಅ.20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಹೋತ್ಸವದ ಮೊದಲ ದಿನವಾದ ಅ.11ರಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ನಾಗತೀರ್ಥ ಹಾಗೂ ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ತಂಡ ನಾಗತೀರ್ಥ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ನೆಕ್ಕಿಲದ ಕು. ಸ್ತುತಿ ಆರ್. ಭಟ್ ಮತ್ತು ಪ್ರಸ್ತುತಿ ಅವರಿಂದ ಭಕ್ತಿಗಾನ ಕಾರ್ಯಕ್ರಮ ನಡೆಯಿತು.
ನಂತರ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಅ.12ರಂದು ಭಜನಾ ಸಂಕೀರ್ತನೆ, ವಾದನ ಕಾರ್ಯಕ್ರಮ
ನವರಾತ್ರಿ ಮಹೋತ್ಸವದ ಎರಡನೇ ದಿನವಾದ ಅ.12ರಂದು ಅಳ್ಳೆ ಚಿಂಗಾಣಿಗುಡ್ಡೆ ಶ್ರೀ ವಿಷ್ಣು ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಮಾಸ್ಟರ್ ಪ್ರಕುಲ್ ತೋಟ ಅವರಿಂದ ತಬಲ ಹಾಗೂ ಕೀಬೋರ್ಡ್ ವಾದನ ಕಾರ್ಯಕ್ರಮವೂ ಜರುಗಲಿದೆ



















Leave a Comment

Your email address will not be published. Required fields are marked *

error: Content is protected !!
Scroll to Top