ಅಧ್ಯಾಪಕ ವೃತ್ತಿ ಪ್ರವೃತ್ತಿಯಾಗಬೇಕು: ಪ್ರಕಾಶ್ ಪಿ.ಎಸ್.

ಪುತ್ತೂರು: ಅಧ್ಯಾಪಕ ವೃತ್ತಿ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ, ಅದು ನಮ್ಮ ಪ್ರವೃತ್ತಿಯಾಗಬೇಕು. ಆಗ ಮಾತ್ರ ಆ ಕ್ಷೇತ್ರದಲ್ಲಿ ಉತ್ತಮವಾಗಿ ಬೆಳೆಯಲು ಸಾಧ್ಯ. ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಆಂತರಿಕ ಶಕ್ತಿಯನ್ನು ಹೊರತರುವ ಕೌಶಲ್ಯವಾಗಿದ್ದು, ಅದರ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ (ರಿ.) ನೇತೃತ್ವದಲ್ಲಿ ನಡೆದ ಭವಿಷ್ ಮತ್ತು ಯಶಸ್ ಘಟಕಗಳ ವಾರ್ಷಿಕ ವಿಶೇಷ ಶಿಬಿರ ‘ಪ್ರೇರಣಾ–2026’ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ.ಎಂ. ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದೆ. ಸಮಾಜದಲ್ಲಿ ವೈದ್ಯರು, ಇಂಜಿನಿಯರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವವರ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರ ಜೊತೆಗೆ ಸಮಾಜದ ಬೆಳವಣಿಗೆಗೂ ಶಿಕ್ಷಕರು ಮಹತ್ವದ ಕೊಡುಗೆ ನೀಡುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಭವಿಷ್ ಘಟಕದ ಮಾರ್ಗದರ್ಶಕ ಗಣಪತಿ ಹೆಗಡೆ, ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹಾಗೂ ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ ಭಟ್. ಎಸ್. ಉಪಸ್ಥಿತರಿದ್ದರು



















Leave a Comment

Your email address will not be published. Required fields are marked *

error: Content is protected !!
Scroll to Top