ಸೇವೆಅರಂತೋಡು: ಇಲ್ಲಿನ ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 17ರಂದು ಶನಿವಾರ ರಾತ್ರಿ 7 ಗಂಟೆಗೆ ಕೊರಗಜ್ಜ ದೈವದ ಅಗೇಲು ಸೇವೆ ನಡೆಯಲಿದೆ.ಅಗೇಲು ಸೇವೆಯ ಬಳಿಕ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.ಅಗೇಲು ಸೇವೆ ಮಾಡಿಸಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 7022077809 ಸಂಖ್ಯೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಅ.17ರಂದು ಅರಂತೋಡು ಕೊಡಂಕೇರಿಯಲ್ಲಿ ಕೊರಗಜ್ಜ ದೈವಕ್ಕೆ ಅಗೇಲು ಸೇವೆ












