ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರದಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿನಿ   ವತಿಯಿಂದ ಅಕ್ಟೋಬರ್ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು
ಅ. 16ರಂದು ಸುಳ್ಯದ ಶ್ರೀ ರಾಂ ಪೇಟೆಯಲ್ಲಿರುವ ಕಾನತ್ತೀಲ ಕಾಂಪ್ಲೆಕ್ಸ್ ನ ದೇವಮ್ಮ ಸಭಾಂಗಣದಲ್ಲಿ ನಡೆಯಿತು.



















ವಿಶ್ವ ಅಂಚೆ ದಿನದ ಅಂಗವಾಗಿ ಅಂಚೆಗಳನ್ನು ಮನೆ ಮನೆಗೆ ತಲುಪಿಸುತ್ತಾ, ನಿಷ್ಠೆ ಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯದ ಕುರುಂಜಿಭಾಗ್ ನ ಪೋಸ್ಟ್ ವುಮನ್ ಶ್ರೀಮತಿ ಅನುರಾಧ ಟಿ ಯವರಿಗೆ
ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿಯನ್ನು ಪ್ರದಾನ   ಮಾಡಲಾಯಿತು.

ಈ ಸಂಧರ್ಭದಲ್ಲಿ ಘಟಕದ ಪೂರ್ವಾಧ್ಯಕ್ಷರಾಗಿ ಘಟಕವನ್ನು ಮುನ್ನಡೆಸಿದ ಪ್ರಸ್ತುತ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಪಿ ಎಸ್ ಗಂಗಾಧರ್ ರವರನ್ನು ಗೌರವಿಸಲಾಯಿತು.
ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜೇಸಿಐ ಸುಳ್ಯ ಪಯಸ್ವಿನಿ ಪೂರ್ವಾಧ್ಯಕ್ಷರೂ, ನ್ಯಾಯವಾದಿಗಳಾದ ಜೇಸಿ ಹೆಚ್ ಜಿ ಎಫ್ ದಿನೇಶ್ ಮಡಪ್ಪಾಡಿ ಅಭಿನಂದನಾ ಭಾಷಣ ಮಾಡಿದರು.
ಸುಳ್ಯ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಜಣ್ಣ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜೇಸಿಐ ಸುಳ್ಯ ಪಯಸ್ವಿಯು ಸಾರ್ವಜನಿಕರಿಗೆ ಸ್ಪಂದನೆಯಾಗುವ ಕೆಲಸಕಾರ್ಯಗಳಿಂದ ಗುರುತಿಸಿಕೊಳ್ಳುತ್ತಿದ್ದು, ಸಮಾಜಮುಖಿಯಾಗಿ ಈಗಾಗಲೇ ಅನೇಕ ಕೆಲಸಗಳನ್ನು ಮಾಡಿರುವುದನ್ನು ಕಂಡಿದ್ದೇನೆ ಎಂದು ಘಟಕವನ್ನು ಶ್ಲಾಘಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಕಾಮತ್, ಕಾರ್ಯದರ್ಶಿ ತಾರಾ ಚೂಂತಾರು ಉಪಸ್ಥಿತರಿದ್ದರು.
ಕಾರ್ಯಕ್ರಮ ದಲ್ಲಿ ಘಟಕದ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದರು. ಸತ್ಯ ಶಾಂತಿ ತ್ಯಾಗ ಮೂರ್ತಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಯಶಿಕಾ ಚೂಂತಾರು ಜೇಸಿವಾಣಿ ಹಾಗೂ ಪ್ರಶಾಂತ್ ಅಂಬೆಕಲ್ಲು ಸನ್ಮಾನಿತರ ಸನ್ಮಾನಪತ್ರವನ್ನು ವಾಚಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top