ಬೆಂಗಳೂರು ಸೇರಿದಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅ.22ರವರೆಗೆ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯ ನಡುವೆಯೇ ಹಿಂಗಾರು ಮಳೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಗುಡುಗು ಸಹಿತ ಮಳೆಯೂ ಸುರಿಯಬಹುದು. ಮಳೆಯ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಗ್ರಾಮೀಣ ಭಾಗದ ರಸ್ತೆಗಳ ಸಂಚಾರಕ್ಕೆ ಅಡಚಣೆ ಉಂಟಾಗುವುದು ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ.



















Leave a Comment

Your email address will not be published. Required fields are marked *

error: Content is protected !!
Scroll to Top