ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಯುವಕನಿಗೆ ಚೂರಿ ಇರಿತ

ಮೂಡಬಿದಿರೆ: ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.
ಚೂರಿ ಇರಿತದಿಂದ ಗಾಯಗೊಂಡ ಯುವಕನನ್ನು ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ವೈಯಕ್ತಿಕ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಯುವಕರ ತಂಡವೊಂದು ಪ್ರಕಾಶ್ ಪೂಜಾರಿ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಹಲ್ಲೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



















Leave a Comment

Your email address will not be published. Required fields are marked *

error: Content is protected !!
Scroll to Top