ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 33ನೇ ಕಂತಿನ ಹಣ ಖಾತೆಗೆ ಜಮೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ದಸರಾ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ದೊರೆತಿದೆ. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಅದರಂತೆ, 33ನೇ ಕಂತಿನ 2,482 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 2,000 ರೂ. ಜಮೆಯಾಗಲಿದೆ. ಇದರೊಂದಿಗೆ ಪ್ರತಿ ಫಲಾನುಭವಿಗೆ ಇದುವರೆಗೆ ದೊರೆತ ಒಟ್ಟು ಮೊತ್ತ 66,000 ರೂ.ಗಳಿಗೆ ಏರಿಕೆಯಾಗಿದೆ.



















Leave a Comment

Your email address will not be published. Required fields are marked *

error: Content is protected !!
Scroll to Top