ಸುಳ್ಯ ದಸರಾ: ಗಣಪತಿ ಹವನ ಸಹಿತ ಚಂಡಿಕಾ ಮಹಾಯಾಗ, ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ

ಸುಳ್ಯ: ಸುಳ್ಯ ದಸರಾ ಮಹೋತ್ಸವದ ಅಂಗವಾಗಿ ಶ್ರೀಶಾರದಾಂಬ ಸಮಿತಿಯ ವತಿಯಿಂದ ಅ.22ರಂದು ಸಂಜೆ 7 ಗಂಟೆಗೆ ಶ್ರೀ ಚಂಡಿಕಾ ಮಹಾಯಾಗ ಹಾಗೂ ಮಾತೆಯರಿಂದ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಭಕ್ತಿಭಾವದಿಂದ ನಡೆಯಿತು.ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಸಹಕಾರದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ದೇವಿಯ ಆರಾಧನೆಯ ಅಂಗವಾಗಿ ನಡೆದ ಮಹಾಯಾಗ ಹಾಗೂ ಸಾಮೂಹಿಕ ಪಾರಾಯಣದಲ್ಲಿ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀಶಾರದಾಂಬ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.



















Leave a Comment

Your email address will not be published. Required fields are marked *

error: Content is protected !!
Scroll to Top