ಕಲ್ಮಡ್ಕ ವಿದ್ಯುತ್ ಅವಘಡ: ಮೃತರ ಕುಟುಂಬಗಳಿಗೆ ಪರಿಹಾರ ಕೋರಿ ಮುಖ್ಯಮಂತ್ರಿಗಳಿಗೆ ಶಾಸಕಿ ಮನವಿ



















ಕಲ್ಮಡ್ಕದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಭರತ್ ಹಾಗೂ ರಮೇಶ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸುಳ್ಯ ಶಾಸಕಿ ಮನವಿ ಸಲ್ಲಿಸಿದ್ದಾರೆ.
ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಮೂಲಕ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರವು ಅವರ ನೆರವಿಗೆ ನಿಲ್ಲಬೇಕು ಹಾಗೂ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top