ಮದ್ಯವರ್ಜನ ಶಿಬಿರವನ್ಬು ಶಿಬಿರಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಶಾಸಕಿ ಭಾಗೀರಥಿ ಮುರುಳ್ಯ

ಪಂಜ: ಮದ್ಯವರ್ಜನ ಶಿಬಿರಗಳ ಮೂಲಕ ಮದ್ಯಪಾನ ಸೇರಿದಂತೆ ವಿವಿಧ ದುಶ್ಚಟಗಳಿಂದವ್ಯಕ್ತಿಗಳನ್ನು ಮುಕ್ತಗೊಳಿಸಿ, ಆರೋಗ್ಯ ಕರ ಹಾಗೂ ದುಶ್ಚಟಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಅಖಿಲ ಕರ್ನಾಟಕ ಜನಜಾಗೃತಿ ಟ್ರಸ್ಟ್ ಶ್ರೇಯಂಶ್ ಕುಮಾರ್ ಹೇಳಿದರು.



















ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.), ಸುಳ್ಯ ತಾಲೂಕು, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಪಂಜ ವಲಯ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ತಾನ ಪಂಜ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ಅ.24ರಂದು ನಡೆದ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವು ಸಮಾಜಮುಖಿ ಕಾರ್ಯಗಳನ್ನು ಪರಿಣಾಮ ಕಾರಿಯಾಗಿ ನಡೆಸುತ್ತಿದೆ. ಶಿಬಿರದಲ್ಲಿ ಭಾಗವಹಿ

ಸಿರುವ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ದುಶ್ಚಟಗಳಿಂದ ದೂರವಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.) ಸುಳ್ಯ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದಲ್ಲಿ ಡಾ. ರಾಮಯ್ಯ ಭಟ್, ಮಾಧವ ಜಾಕೆ, ಡಾ. ದೇವಿಪ್ರಸಾದ್ ಕಾನತ್ತೂರು, ಪದ್ಮನಾಭ ರೈ ಅಗೋಳಿಬೈಲು ಗುತ್ತು, ಭರತ್ ನೆಕ್ಕಾಜೆ, ನೇಮಿರಾಜ ಪಲೋಡಿ, ಪಿ.ಸಿ. ಜಯರಾಮ್, ವಿಮಲಾ

ರಂಗಯ್ಯ, ಮೋನಪ್ಪ ಗೌಡ ಬೊಳ್ಳಾಜೆ ಹಾಗೂ ಧರ್ಮ ಪಾಲ್ ಕಣಕಲ್ ಇದ್ದರು ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಲ್ವಿಚಾರಕಿ ಮಮತ ಕಾರ್ಯಕ್ರಮ ನಿರೂಪಿಸಿದರು. ವಿನೋದ್ ಬೊಳ್ಳಲೆ ವಂದಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top