ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕಿ ಭಾಗೀರಥಿ

ಸುಳ್ಯ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು.






















ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ . , ಮಹರ್ಷಿ ವಾಲ್ಮೀಕಿ ಅವರು ತಮ್ಮ ಮಹಾಕಾವ್ಯವಾದ ರಾಮಾಯಣದ ಮೂಲಕ ಸಮಾಜಕ್ಕೆ ಆದರ್ಶ ಜೀವನಮೌಲ್ಯಗಳನ್ನು ನೀಡಿದ್ದಾರೆ. ಅವರ ಆದರ್ಶಗಳು ಹಾಗೂ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.
ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸನ್ಮಾನಿಸಿದರು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಕ್ರೀಡಾ ಸಮವಸ್ತ್ರ ವಿತರಿಸಿದರು.
ವಾಲ್ಮೀಕಿ ಮಹರ್ಷಿಯ ಜೀವನಾದರ್ಶಗಳನ್ನು ಸ್ಮರಿಸುವುದರೊಂದಿಗೆ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸಿ, ಅವರ ಮುಂದಿನ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗಳಿಗೆ ಪ್ರೋತ್ಸಾಹ ನೀಡಲಾಯಿತು.

Leave a Comment

Your email address will not be published. Required fields are marked *

error: Content is protected !!
Scroll to Top