ಸುಳ್ಯದಲ್ಲಿ ಇಂದು ಮೆಸ್ಕಾಂ ಜನಸಂಪರ್ಕ ಸಭೆ

ಸುಳ್ಯ: ಅ.30: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಮೆಸ್ಕಾಂ) ವತಿಯಿಂದ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಅ.30ರಂದು ನಡೆಯಲಿದೆ.























ಸುಳ್ಯದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ತಮ್ಮ ವಿದ್ಯುತ್ ಸಂಪರ್ಕ, ವಿದ್ಯುತ್ ಪೂರೈಕೆ ಹಾಗೂ ಇತರ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿ, ಸಭೆಯ ಪ್ರಯೋಜನ ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

error: Content is protected !!
Scroll to Top