October 2026

ಪಂಜದಲ್ಲಿ ಮಧ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ; ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅ.12ರಂದು ಮಧ್ಯವರ್ಜನ ಶಿಬಿರದ ನಾಲ್ಕನೇ ಪೂರ್ವಭಾವಿ ಸಭೆ ನಡೆಯಿತು.ಸಭೆಯ ಬಳಿಕ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದವರು ದೇವರಲ್ಲಿ ಪ್ರಾರ್ಥಿಸಿ, ಮಧ್ಯವರ್ಜನ ಶಿಬಿರವು ಯಶಸ್ವಿಯಾಗಿ ನಡೆಯಲಿ ಎಂದು ಬೇಡಿಕೊಂಡರು.ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ರೈ ಅಗೋಳಿಬೈಲು ಗುತ್ತು ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.ಸಭೆಯಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ

ಪಂಜದಲ್ಲಿ ಮಧ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ; ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಲ್ಮಡ್ಕದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ

ಸುಳ್ಯ: ಅ.13: ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಸಂಭವಿಸಿದೆ.ಮೃತರನ್ನು ಬೊಮ್ಮೆಟ್ಟಿಯ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.ವಿದ್ಯುತ್ ಶಾಕ್ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.ಇಬ್ಬರು ಯುವಕರ ಅಕಾಲಿಕ ಸಾವಿನಿಂದ ಸ್ಥಳೀಯವಾಗಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಕಲ್ಮಡ್ಕದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹರಿಯಾಣ ಮೂಲದ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಡಾ. ಸುಧಾ ಯಾದವ್ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಗಡಿಭದ್ರತಾ ಪಡೆಯ ಡೆಪ್ಯುಟಿ ಕಮಾಂಡೆಂಟ್ ಸುಖ್‌ಬೀರ್ ಸಿಂಗ್ ಯಾದವ್ ಅವರ ಪತ್ನಿ. ಶೈಕ್ಷಣಿಕ ಸಂಶೋಧನಾ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು, ರಾಜಕೀಯ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. 1999ರಿಂದ 2004ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ Read More »

ಪಂಜ ದೇವಸ್ಥಾನದಲ್ಲಿ ನವರಾತ್ರಿ ಪೂಜೆ: ಭಜನಾ ಸಂಕೀರ್ತನೆ, ತಬಲಾ-ಕೀಬೋರ್ಡ್ ವಾದನ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.11ರಂದು ಆರಂಭಗೊಂಡಿದ್ದು, ಅ.20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಅ.12ರಂದು ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ತಂಡ ನಾಗತೀರ್ಥ ಹಾಗೂ ಅಲ್ಪ ಚಿಂಗಾಣಿಗುಡ್ಡೆ ಶ್ರೀ ವಿಷ್ಣು ಭಜನಾ ಮಂಡಳಿಯ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ಮಾಸ್ಟರ್ ಪ್ರಕುಲ್ ತೋಟ ಅವರು ತಬಲಾ ಮತ್ತು ಕೀಬೋರ್ಡ್ ವಾದನದ ಮೂಲಕ ಭಕ್ತರನ್ನು ರಂಜಿಸಿದರು.ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ

ಪಂಜ ದೇವಸ್ಥಾನದಲ್ಲಿ ನವರಾತ್ರಿ ಪೂಜೆ: ಭಜನಾ ಸಂಕೀರ್ತನೆ, ತಬಲಾ-ಕೀಬೋರ್ಡ್ ವಾದನ Read More »

ಅಧ್ಯಾಪಕ ವೃತ್ತಿ ಪ್ರವೃತ್ತಿಯಾಗಬೇಕು: ಪ್ರಕಾಶ್ ಪಿ.ಎಸ್.

ಪುತ್ತೂರು: ಅಧ್ಯಾಪಕ ವೃತ್ತಿ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ, ಅದು ನಮ್ಮ ಪ್ರವೃತ್ತಿಯಾಗಬೇಕು. ಆಗ ಮಾತ್ರ ಆ ಕ್ಷೇತ್ರದಲ್ಲಿ ಉತ್ತಮವಾಗಿ ಬೆಳೆಯಲು ಸಾಧ್ಯ. ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಆಂತರಿಕ ಶಕ್ತಿಯನ್ನು ಹೊರತರುವ ಕೌಶಲ್ಯವಾಗಿದ್ದು, ಅದರ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್. ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ (ರಿ.) ನೇತೃತ್ವದಲ್ಲಿ

ಅಧ್ಯಾಪಕ ವೃತ್ತಿ ಪ್ರವೃತ್ತಿಯಾಗಬೇಕು: ಪ್ರಕಾಶ್ ಪಿ.ಎಸ್. Read More »

ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ: ವಿಕಸಿತ ಭಾರತ ಸಂಕಲ್ಪದ ಜಾಗೃತಿಗೆ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ 25 ವರ್ಷಗಳ ಆಡಳಿತದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.2047ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದೊಂದಿಗೆ ಒಂದು ತಿಂಗಳ ಕಾಲ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಯೋಜನೆಯ ಭಾಗವಾಗಿ ಈ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೀದಿ ನಾಟಕಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು, ದೇಶದ ಪ್ರಗತಿಯಲ್ಲಿ

ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ: ವಿಕಸಿತ ಭಾರತ ಸಂಕಲ್ಪದ ಜಾಗೃತಿಗೆ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ Read More »

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಪದಗ್ರಹಣ

ಸುಳ್ಯ, ಅ.12: ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ (ರಿ.) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಎಸ್. ಸಂಶುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಸಂಯೋಜಕ ಎನ್. ಜಯಪ್ರಕಾಶ್ ರೈ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಪದಗ್ರಹಣ Read More »

ಅರಂತೋಡು ಕೊಡಂಕೇರಿ ಸಮೀಪ ಕಾರು ಅಪಘಾತ: ಮಹಿಳೆಗೆ ಗಾಯ

ಸುಳ್ಯ: ಅ.12: ಅರಂತೋಡು ಸಮೀಪದ ಕೊಡಂಕೇರಿ ಬಳಿ ಅ.12ರಂದು ಕಾರೊಂದು ಅಪಘಾತಕ್ಕೀಡಾಗಿ ಜಖಂಗೊಂಡಿದ್ದು, ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.ಗಾಯಗೊಂಡ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಪತಿ ಬಿದ್ದಪ್ಪ ಹಾಗೂ ಮಗಳು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಗಾಯಗೊಂಡ ರೇಖಾ ಅವರನ್ನು ಅರಂತೋಡಿನ ಸಮೃದ್ಧಿ ಆಂಬ್ಯುಲೆನ್ಸ್‌ನ ಶರತ್ ಅಡ್ಯಡ್ಕ ಅವರು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.ಕಾರು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅರಂತೋಡು ಕೊಡಂಕೇರಿ ಸಮೀಪ ಕಾರು ಅಪಘಾತ: ಮಹಿಳೆಗೆ ಗಾಯ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 6ನೇ ವರ್ಷದ ದಸರಾಗೊಂಬೆ ಹಬ್ಬ ಉದ್ಘಾಟನೆ

ಸುಳ್ಯ: ಇಲ್ಲಿನ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 6ನೇ ವರ್ಷದ ದಸರಾ ಗೊಂಬೆ ಹಬ್ಬ-2026ರ ಉದ್ಘಾಟನಾ ಸಮಾರಂಭ ಸಂಭ್ರಮದಿಂದ ನಡೆಯಿತು. ಶ್ರೀ ಶಾರದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ತಂದೆ-ತಾಯಿ ಇಬ್ಬರೂ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ. ಶಾಲೆ ಮತ್ತು ಪೋಷಕರ ನಡುವಿನ ಸಹಕಾರ ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ಅವರ ಪ್ರತಿಭೆ ಮತ್ತು ಸಾಮರ್ಥ್ಯವನ್ನು

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 6ನೇ ವರ್ಷದ ದಸರಾಗೊಂಬೆ ಹಬ್ಬ ಉದ್ಘಾಟನೆ Read More »

ವೃತ್ತಿ ಶಿಕ್ಷಣ ಪ್ರವೇಶದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಶೇ.7.5 ಮೀಸಲಾತಿ

ಬೆಂಗಳೂರು: ಇಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಗ್ರಾಮೀಣ ಭಾಗದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.ಸರಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಮೀಸಲಾತಿಯ ಪ್ರಯೋಜನ ಪಡೆಯಲಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶದಲ್ಲಿ ಈಗಾಗಲೇ ಜಾರಿಯಲ್ಲಿರುವ ಶೇ.15ರಷ್ಟು ಮೀಸಲಾತಿಯಲ್ಲೇ ಅರ್ಧದಷ್ಟು ಸೀಟುಗಳನ್ನು ಸರಕಾರಿ ಶಾಲಾ ಮಕ್ಕಳಿಗೆ ಮೀಸಲಿಡುವಂತೆ ನಿಯಮಕ್ಕೆ ತಿದ್ದುಪಡಿ ತರಲಾಗಿದೆ.ಸರಕಾರಿ ಶಾಲೆಗಳಲ್ಲಿ ಓದುವ ಗ್ರಾಮೀಣ

ವೃತ್ತಿ ಶಿಕ್ಷಣ ಪ್ರವೇಶದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಶೇ.7.5 ಮೀಸಲಾತಿ Read More »

error: Content is protected !!
Scroll to Top