November 4, 2026

ಅಜ್ಜಾವರ : ಶಾಲಾ ಬಸ್ ಗಳ ನಡುವೆ ಅಪಘಾತ

ಸುಳ್ಯ:ಆಲೆಟ್ಟಿ–ನಾರ್ಕೋಡು–ಅಜ್ಜಾವರ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಎರಡು ಖಾಸಗಿ ಶಾಲಾ ಬಸ್‌ಗಳು ಬೆಳ್ಳಪ್ಪಾರೆ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾದ ಘಟನೆ ನವೆಂಬರ್ 4ರ ಬುಧವಾರ ಬೆಳಗ್ಗೆ ಸಂಭವಿಸಿದೆ.ಸುಳ್ಯದ ಡೆಂಟಲ್ ಕಾಲೇಜಿನ ಬಸ್ ಹಾಗೂ ರೋಟರಿ ಶಾಲೆಯ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ಬಸ್‌ಗಳ ಮುಂಭಾಗಕ್ಕೆ ಹಾನಿಯಾಗಿದೆ. ಬಸ್‌ಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.ಆಲೆಟ್ಟಿ ಮುಖ್ಯ ರಸ್ತೆಯ ನಾಗಪಟ್ಟಣ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಅಜ್ಜಾವರ ರಸ್ತೆಯ

ಅಜ್ಜಾವರ : ಶಾಲಾ ಬಸ್ ಗಳ ನಡುವೆ ಅಪಘಾತ Read More »

ಹಾಲು, ಮೊಸರು ದರ ಏರಿಕೆ: ಬಡವರ ಪಾಲಿಗೆ ಗಾಯದ ಮೇಲೆ ಬರೆ!

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಹಾಲು ಮತ್ತು ಮೊಸರಿನ ದರ ಏರಿಕೆ ಮತ್ತೊಂದು ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಬೆಳಗಿನ ಚಹಾದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರದವರೆಗೆ ನಿತ್ಯ ಬಳಕೆಯಲ್ಲಿರುವ ಹಾಲು, ಮೊಸರು ಈಗ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕೈಗೆಟುಕದಂತಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.ಹಾಲು ಕೇವಲ ಆಹಾರ ಪದಾರ್ಥವಲ್ಲ. ಅನೇಕ ಕುಟುಂಬಗಳ ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗ. ಮಕ್ಕಳಿಗೆ ಕುಡಿಯಲು ಹಾಲು, ಹಿರಿಯರಿಗೆ ಮೊಸರು, ಮನೆಯ ಅಡುಗೆಗೆ ಹಾಲಿನ ಉತ್ಪನ್ನಗಳು

ಹಾಲು, ಮೊಸರು ದರ ಏರಿಕೆ: ಬಡವರ ಪಾಲಿಗೆ ಗಾಯದ ಮೇಲೆ ಬರೆ! Read More »

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ನ.4: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ನವೆಂಬರ್ 4 ಮತ್ತು 5ರಂದು ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ನವೆಂಬರ್ 6ರಿಂದ ಕರಾವಳಿ ಭಾಗದಲ್ಲಿ ಮಳೆಯ ಎಚ್ಚರಿಕೆ ಇರುವುದಿಲ್ಲ ಎಂದು ಇಲಾಖೆಯ ಮುನ್ಸೂಚನೆ ತಿಳಿಸಿದೆ.ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ ಬೆಂಗಳೂರು

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ ಎಚ್ಚರಿಕೆ Read More »

ಅರಂತೋಡಿನಲ್ಲಿ ಅರೆಭಾಷೆ ಸಾಹಿತ್ಯ ಸಂಭ್ರಮ

ಅರಂತೋಡು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕದ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ನ.3ರಂದು ಅರಂತೋಡಿನ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದ ಸಂಚಾಲಕ ವಸಂತ್ ಎ.ಸಿ. ಮಾತನಾಡಿ, ಅರೆಭಾಷೆಯು ನಮ್ಮ ಭಾಗದ ಅಸ್ಮಿತೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ

ಅರಂತೋಡಿನಲ್ಲಿ ಅರೆಭಾಷೆ ಸಾಹಿತ್ಯ ಸಂಭ್ರಮ Read More »

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರಿಗೆ ಸನ್ಮಾನ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರದ ಯಶಸ್ಸಿಗೆ ಸಹಕರಿಸಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನುಸನ್ಮಾನಿಸಿ ಗೌರವಿಸಲಾಯಿತು.ಮಾಜಿ ಸಚಿವ ಎಸ್. ಅಂಗಾರ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಹಾಗೂ ಧರ್ಮಪಾಲ ಕಣಕ್ಕಲ್ ಅವರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರಿಗೆ ಸನ್ಮಾನ Read More »

error: Content is protected !!
Scroll to Top