ಅರಂತೋಡಿನಲ್ಲಿ ಅರೆಭಾಷೆ ಸಾಹಿತ್ಯ ಸಂಭ್ರಮ

ಅರಂತೋಡು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕದ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ನ.3ರಂದು ಅರಂತೋಡಿನ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದ ಸಂಚಾಲಕ ವಸಂತ್ ಎ.ಸಿ. ಮಾತನಾಡಿ, ಅರೆಭಾಷೆಯು ನಮ್ಮ ಭಾಗದ ಅಸ್ಮಿತೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೆರಾಲ್ ಅವರು ‘ಅರೆಭಾಷೆಯಲ್ಲಿ ಸಾಹಿತ್ಯ ರಚನೆಯ ಸಾಧ್ಯತೆಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

























ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕಿಶೋರ್ ಕುಮಾರ್ ಕಿರ್ಲಾಯ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಭಾವನಾ ಸುಗಮ ಸಂಗೀತ ಬಳಗದ ಕೆ.ಆರ್. ಗೋಪಾಲಕೃಷ್ಣ ಅವರು ಅರೆಭಾಷೆ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ವಿದ್ಯಾಲಯದ ಪ್ರಾಂಶುಪಾಲ ರಮೇಶ್, ಮುಖ್ಯ ಶಿಕ್ಷಕ ಸೋಮಶೇಖರ್ ಹಾಗೂ ಪಾಪ್ಯುಲರ್ ಎಜುಕೇಶನ್ ಸೊಸೈಟಿ ಅರಂತೋಡು ಇದರ ಕಾರ್ಯದರ್ಶಿ ಎ. ಅಬ್ದುಲ್ಲ ಭಾಗವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ., ತೇಜಸ್ವಿ ಕಡಪಳ ಹಾಗೂ ಜಿಲ್ಲಾ ಪ್ರತಿನಿಧಿ ಶ್ರೀರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಚಾಲಕಿ ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿ, ನಿರೂಪಿಸಿದರು. ಪ್ರಾಂಶುಪಾಲ ರಮೇಶ್ ವಂದಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top