ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರದ ಯಶಸ್ಸಿಗೆ ಸಹಕರಿಸಿದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರನ್ನು
ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಸಚಿವ ಎಸ್. ಅಂಗಾರ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಹಾಗೂ ಧರ್ಮಪಾಲ ಕಣಕ್ಕಲ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಮಾಜಿ ಜಿಲ್ಲಾ ಅಧ್ಯಕ್ಷ ಎನ್.ಎ. ರಾಮಚಂದ್ರ, ಅಧ್ಯಕ್ಷ ವಿಶ್ವನಾಥ ರೈ ಕಳಂಜ, ತಾಲೂಕು ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಬೂಡು ರಾಧಾಕೃಷ್ಣ ರೈ, ಡಾ. ರಾಮದಾಸ್ ಕೊಕ್ಕಡ, ವಿಶ್ವನಾಥ ಗೌಡ ಕಲ್ಲೆಂಬಿ, ರಾಮಕೃಷ್ಣ ರೈ ಮಾಲೆಂಗ್ರಿ, ಶಿವರಾಮಯ್ಯ ಕರ್ಮಜೆ, ಜಯರಾಮ ರೈ ಜಾಲ್ಲೂರು, ವಿಶ್ವನಾಥ ರೈ ಅರ್ಗುಡಿ, ಮೋನಪ್ಪ ಗೌಡ ಬೊಳ್ಳಾಜೆ, ಯೋಜನಾಧಿಕಾರಿ ಮಾಧವ ಗೌಡ, ಶಿಬಿರಾಧಿಕಾರಿ ದೇವಿಪ್ರಸಾದ್, ಶಿವಪ್ರಸಾದ್ ಮಾದನಮನೆ, ವಿಶ್ವನಾಥ ಸಂಪ ಹಾಗೂ ಸತೀಶ್ ಟಿ.ಎನ್. ಉಪಸ್ಥಿತರಿದ್ದರು.
ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಹಾಗೂ ಇತರರಿಗೆ ಸನ್ಮಾನ
















