ಅರಂತೋಡು: ಕೆ.ಆರ್. ಪದ್ಮನಾಭ ನಿಧನ

ಅರಂತೋಡು: ಅರಂತೋಡು ಗ್ರಾಮದ ಕುರುಂಜಿ ನಿವಾಸಿ, ಹಿರಿಯ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದ ಮುಂದಾಳು ಕೆ.ಆರ್. ಪದ್ಮನಾಭ ಅವರು ನ.11ರಂದು ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು.
ಅವರು ಅರಂತೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ, ಭಜನಾ ಮಂದಿರದ ಅಧ್ಯಕ್ಷರಾಗಿ, ಸಹಕಾರಿ ಸಂಘದ ಅಧ್ಯಕ್ಷರಾಗಿ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ ಹಾಗೂ ಪಾಪ್ಯುಲರ್ ಎಜುಕೇಶನ್ ಸೊಸೈಟಿಯ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಅಲ್ಲದೆ ಪಂಚಾಯತ್ ಸದಸ್ಯರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ಹಾಗೂ ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿದ್ದರು. ಶಿಕ್ಷಣ, ಸಹಕಾರ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆ ಗಮನಾರ್ಹವಾಗಿದೆ.
ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್. ಗಂಗಾಧರ ಸೇರಿದಂತೆ ಸಹೋದರರನ್ನು ಹಾಗೂ ಸಹೋದರಿಯರನ್ನು ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 8 ರಿಂದ 12 ರ ತನಕ ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತದೆ .ಶವಸಂಸ್ಕಾರ ಕಾರ್ಯಕ್ರಮ ಅಪರಾಹ್ನ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.





































































Leave a Comment

Your email address will not be published. Required fields are marked *

error: Content is protected !!
Scroll to Top