ಅಮೃತ ಭಾರತ್ ಯೋಜನೆಯಡಿ ನವೀಕರಣಗೊಂಡ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಸುಬ್ರಹ್ಮಣ್ಯ: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವ ಅಶ್ವಿನಿ ವೈಷ್ಣವ್ ಅವರು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಇಂದು ಭೇಟಿ ನೀಡಿದರು.ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ನವೀಕರಣಗೊಂಡಿರುವ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗಿದ್ದು, ಪ್ರಯಾಣಿಕರಿಗೆ ಅಗತ್ಯವಾದ ಆಧುನಿಕ ಮೂಲಸೌಕರ್ಯ ಹಾಗೂ ಸುಧಾರಿತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.ನೂತನವಾಗಿ ಆರಂಭಗೊಂಡ ವಂದೇ ಭಾರತ್ ರೈಲಿನಲ್ಲಿ ಆಗಮಿಸಿದ









