ನೆಲ್ಯಾಡಿ ಗ್ರಾಮದ ಸರ್ವೆ ನಂ.186ರ ಜಂಟಿ ಸರ್ವೆಗೆ ಆಗ್ರಹ: ಕಂದಾಯ ಸಚಿವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಸುಳ್ಯ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂಬರ್ 186ರ ಜಂಟಿ ಸರ್ವೆ ನಡೆಸಿ, ಸರ್ಕಾರಿ ಹಾಗೂ ಅರಣ್ಯ ಇಲಾಖೆಯ ಜಾಗಗಳ ಗಡಿ ಗುರುತಿಸುವಂತೆ ಆಗ್ರಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.
ನೆಲ್ಯಾಡಿ ಗ್ರಾಮದ ಸರ್ವೆ ನಂಬರ್ 186ರ ಜಂಟಿ ಸರ್ವೆ ಇದುವರೆಗೂ ನಡೆಯದಿರುವುದರಿಂದ ಈ ವ್ಯಾಪ್ತಿಯ ಸಾರ್ವಜನಿಕರಿಗೆ ನಿವೇಶನ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ತೊಂದರೆಯಾಗುತ್ತಿದೆ. ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳುವುದಕ್ಕೂ ಅಡಚಣೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ, ಸರ್ವೆ ನಂಬರ್ 186ರ ಜಂಟಿ ಸರ್ವೆಯನ್ನು ತುರ್ತಾಗಿ ನಡೆಸಬೇಕು. ಸರ್ಕಾರಿ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಜಾಗಗಳ ಗಡಿಯನ್ನು ಸ್ಪಷ್ಟವಾಗಿ ಗುರುತಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಶಾಸಕಿ ಸಚಿವರಲ್ಲಿ ಮನವಿ ಮಾಡಿದರು.
ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.





































































Leave a Comment

Your email address will not be published. Required fields are marked *

error: Content is protected !!
Scroll to Top