ಸಹಕಾರ ಕ್ಷೇತ್ರದ ಸುದೀರ್ಘ ಸೇವೆಗೆ ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ

ನ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಪ್ರಶಸ್ತಿ ಪ್ರದಾನ





































































ಸುಳ್ಯ: ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡು, ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಅವರು ಪ್ರತಿಷ್ಠಿತ ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ.14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪಂಬೆತ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಜಾಕೆ ಮಾಧವ ಗೌಡರು ಪ್ರಸ್ತುತ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷರಾಗಿ, ಸುಳ್ಯ ಎಪಿಎಂಸಿಯ ಮಾಜಿ ಅಧ್ಯಕ್ಷರಾಗಿ, ಸುಳ್ಯ ಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾಗಿ ಹಾಗೂ ಸುಳ್ಯ ಎಂ.ಎಸ್.ನ ಮಾಜಿ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಸಹಕಾರಿ ಚಟುವಟಿಕೆಗಳಲ್ಲಿ ಸುದೀರ್ಘ ಅನುಭವ ಹೊಂದಿರುವ ಅವರು, ವಿವಿಧ ಸಂಸ್ಥೆಗಳ ಮೂಲಕ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಈ ಗೌರವ ನೀಡಲಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top