ಅಮೃತ ಭಾರತ್ ಯೋಜನೆಯಡಿ ನವೀಕರಣಗೊಂಡ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ

ಸುಬ್ರಹ್ಮಣ್ಯ: ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವ ಅಶ್ವಿನಿ ವೈಷ್ಣವ್ ಅವರು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾದ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣಕ್ಕೆ ಇಂದು ಭೇಟಿ ನೀಡಿದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ನವೀಕರಣಗೊಂಡಿರುವ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗಿದ್ದು, ಪ್ರಯಾಣಿಕರಿಗೆ ಅಗತ್ಯವಾದ ಆಧುನಿಕ ಮೂಲಸೌಕರ್ಯ ಹಾಗೂ ಸುಧಾರಿತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನೂತನವಾಗಿ ಆರಂಭಗೊಂಡ ವಂದೇ ಭಾರತ್ ರೈಲಿನಲ್ಲಿ ಆಗಮಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಈ ಸಂದರ್ಭದಲ್ಲಿ ಸ್ವಾಗತಿಸಲಾಯಿತು. ಬಳಿಕ ವೇದಿಕೆಯಲ್ಲಿ ಮಾತನಾಡಿದ ಅವರು ರೈಲ್ವೆ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ರೈಲ್ವೆ ಮಂಡಳಿ ಸಲಹಾ ಸಮಿತಿ ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.





































































Leave a Comment

Your email address will not be published. Required fields are marked *

error: Content is protected !!
Scroll to Top