ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜಯಂತಿ


ಆಧುನಿಕ ಭಾರತದ ನಿರ್ಮಾಣದ ಧೀಮಂತ ನಾಯಕರು, ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ *ಪಂಡಿತ್ ಜವಾಹರ್ ಲಾಲ್ ನೆಹರೂ* ಅವರ *137ನೇ ಜನ್ಮದಿನಾಚರಣೆ ಕಾರ್ಯಕ್ರಮ  ನ.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.





































































ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ ಎಸ್ ಗಂಗಾಧರ್ ಹಾಗೂ ಸೂಡ ಅಧ್ಯಕ್ಷ ಕೆ ಎಂ ಮುಸ್ತಫಾ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಸದಸ್ಯ ನಂದರಾಜ್ ಸಂಕೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ನಗರ ಪಂಚಾಯತ್ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಜಮಾಲ್ ಪಂಜ, ಜುಬೇರ್ ಆರಂತೋಡು, ಪ್ರಕಾಶ್ ಬಂಗ್ಲೆಗುಡ್ಡೆ,  ಮಂಜುನಾಥ್ ಮಡ್ತಿಲ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top