ತೊಡಿಕಾನ ಶಾಲೆಯಲ್ಲಿ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಅರಂತೋಡು, ನ.14: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಅರಂತೋಡು ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನ.14ರಂದು ತೊಡಿಕಾನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.





































































ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನವೀನ್ ಎ.ಬಿ. ಅಧ್ಯಕ್ಷತೆ ವಹಿಸಿದ್ದರು.

ಅರಂತೋಡು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಅವರು ಪ್ರತಿಭಾ ಕಾರಂಜಿಯ ಮಹತ್ವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ವಿಕಸನದಲ್ಲಿ ಇಂತಹ ವೇದಿಕೆಗಳ ಪಾತ್ರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಬನ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಜಿ. ಪಂಜಿಕೋಡಿ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸುಂದರ ಬಾಜಿನಡ್ಕ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ ಸ್ವಾಗತಿಸಿದರು. ಸಹಶಿಕ್ಷಕಿ ಸುನಿತಾ ವಂದಿಸಿದರು. ಶಿಕ್ಷಕ ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು.

ಅರಂತೋಡು ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top