ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಪುತ್ತೂರಿನ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ಆಯ್ಕೆ
ಪುತ್ತೂರು: ದ. ಕ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಭಾಜನವಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಗರಿ ಮೂಡಿಸಿದೆ.ನ. 20ರಂದು ಶುಕ್ರವಾರ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಪ್ರಶಸ್ತಿ

