ಅರಂತೋಡು ಗ್ರಾಮ ಪಂಚಾಯತ್ ಸಿಬ್ಬಂದಿ ಚೌಕರ್ ನಿಧನ

ಅರಂತೋಡು: ತೊಡಿಕಾನ ದೊಡ್ಡಕುಮೇರಿ ನಿವಾಸಿ ಅರಂತೋಡು ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ಚೌಕರ್ (55) ಅವರು ಅಸೌಖ್ಯದಿಂದ ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತ್ನಿ ಮಾಲತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಹಾಗೂ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.









































































Leave a Comment

Your email address will not be published. Required fields are marked *

error: Content is protected !!
Scroll to Top