ಸುಳ್ಯ: ಸುಳ್ಯ, ಸುಬ್ರಹ್ಮಣ್ಯ ಹಾಗೂ ಪಂಜ ಅರಣ್ಯ ವಲಯಗಳಲ್ಲಿ ಫಾರೆಸ್ಟ್ ರೇಂಜ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಂಜುನಾಥ್ ಎನ್. ಅವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಆಗಿ ಪದೋನ್ನತಿ ಪಡೆದಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ವರ್ಗಾವಣೆಗೊಂಡಿದ್ದ ಅವರು ಪ್ರಸ್ತುತ ಕುಶಾಲನಗರದ ಅರಣ್ಯ ತರಬೇತಿ ಕೇಂದ್ರದಲ್ಲಿ ರೇಂಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದೀಗ ಸರಕಾರದ ಆದೇಶದಂತೆ ಅವರನ್ನು ಸುಳ್ಯದ ಕೆಎಫ್‌ಡಿಸಿ (ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ) ಸಹಾಯಕ ವಿಭಾಗೀಯ ವ್ಯವಸ್ಥಾಪಕರ ಕಚೇರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಮಂಜುನಾಥ್ ಎನ್. ಅವರಿಗೆ ಎಸಿಎಫ್ ಆಗಿ ಪದೋನ್ನತಿ








































