ಪಕ್ಷ ಸಂಘಟನೆ ಬಲಪಡಿಸಲು ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ನಾಳೆ ಗುತ್ತಿಗಾರಿಗೆ  ಭೇಟಿ

*ಗುತ್ತಿಗಾರು, ನ.20:* ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಸಿದ್ಧತೆ ಮತ್ತು ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.21ರಂದು ಗುತ್ತಿಗಾರಿನಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.









































































ಎಐಸಿಸಿ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಹಾಗೂ ಆಂಧ್ರಪ್ರದೇಶ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪಿ.ವಿ. ಮೋಹನ್ ಅವರು ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ಗುತ್ತಿಗಾರಿನ ಲಯನ್ಸ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ಗುತ್ತಿಗಾರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಗುತ್ತಿಗಾರು, ನಾಲ್ಕೂರು, ಹರಿಹರ ಪಲ್ಲತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಡ್ಕ, ಮಡಪ್ಪಾಡಿ, ದೇವಚಳ್ಳ, ನೆಲ್ಲೂರು ಕೆಮ್ರಾಜೆ, ಮರ್ಕಂಜ, ಉಬರಡ್ಕ ಮಿತ್ತೂರು, ಅರಂತೋಡು, ತೊಡಿಕಾನ ಹಾಗೂ ಸಂಪಾಜೆ ಗ್ರಾಮಗಳ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್‌ಗಳ ಮಾಜಿ ಸದಸ್ಯರು, ಪಕ್ಷದ ಮುಂಚೂಣಿ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಡಿಸಿಸಿ ಮತ್ತು ಕೆಪಿಸಿಸಿ ಪದಾಧಿಕಾರಿಗಳು, ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಕರ್ತರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹಾಗೂ ಪ್ರಧಾನ ಕಾರ್ಯದರ್ಶಿ (ಆಡಳಿತ) ಭವಾನಿಶಂಕರ್ ಕಲ್ಮಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top