ಸುಳ್ಯ: ರಾಜ್ಯದ ಕಾಂಗ್ರೆಸ್ ಸರಕಾರದ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ನ.20ರಂದು (ಇಂದು) ಪ್ರತಿಭಟನಾ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ.
‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿರುವ ಈ ಜನಾಂದೋಲನವು ಪೂರ್ವಾಹ್ನ 10 ಗಂಟೆಗೆ ಸುಳ್ಯ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದೆ. ಅಲ್ಲಿಂದ ನಗರ ಪಂಚಾಯತ್ ಕಚೇರಿವರೆಗೆ ಪ್ರತಿಭಟನಾ ಪಾದಯಾತ್ರೆ ಸಾಗಲಿದ್ದು, ಬಳಿಕ ನಗರ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.
ರಾಜ್ಯ ಸರಕಾರದ ಆಡಳಿತ ವೈಫಲ್ಯ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ
ಕಾಂಗ್ರೆಸ್ ಸರಕಾರದ ವೈಫಲ್ಯ ಖಂಡಿಸಿ ಇಂದು ಸುಳ್ಯದಲ್ಲಿ ಬಿಜೆಪಿ ಪ್ರತಿಭಟನಾ ಪಾದಯಾತ್ರೆ‘








































