ತೊಡಿಕಾನದಲ್ಲಿ ಹೈನುಗಾರಿಕಾ ಕೃಷಿ ತರಬೇತಿ ಕಾರ್ಯಕ್ರಮ

ತೊಡಿಕಾನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ, ಸಂಪಾಜೆ ವಲಯದ ತೊಡಿಕಾನ ಕಾರ್ಯಕ್ಷೇತ್ರ ಹಾಗೂ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಹೈನುಗಾರಿಕಾ ಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು.









































































ತೊಡಿಕಾನ ಒಕ್ಕೂಟದ ಮಾದರಿ ಹೈನುಗಾರಿಕಾ ರೈತರಾದ ಜಗದೀಶ್ ಬಾಳೆಕಜೆ ಅವರ ಹೈನುಗಾರಿಕಾ ತೋಟದಲ್ಲಿ ತರಬೇತಿ ಆಯೋಜಿಸಲಾಗಿತ್ತು. ಡೈರಿ ವಿಸ್ತರಣಾಧಿಕಾರಿ ಶಿವಕುಮಾರ್ ಅವರು ಹೈನುಗಾರಿಕೆಯ ಸಮಗ್ರ ನಿರ್ವಹಣೆ, ಹಸುಗಳ ಆರೈಕೆ, ಹಾಲಿನ ಉತ್ಪಾದನೆ ಹೆಚ್ಚಿಸುವ ವಿಧಾನ ಹಾಗೂ ವೈಜ್ಞಾನಿಕ ಹೈನುಗಾರಿಕೆಯ ಕುರಿತು ರೈತರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೊಡಿಕಾನ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಸಾವಿತ್ರಿ ಭಟ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಹೂವಯ್ಯ ಗೌಡ, ಉಪಾಧ್ಯಕ್ಷ ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು. ಕೃಷಿ ಮೇಲ್ವಿಚಾರಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುಂದರ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಹೈನುಗಾರಿಕೆಯಲ್ಲಿ ಆಸಕ್ತಿ ಹೊಂದಿರುವ ರೈತರು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top