ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಗ್ರೇಡ್-1 ಪ್ರಾಂಶುಪಾಲರಾಗಿ ಡಾ. ಅಚ್ಯುತ ಪೂಜಾರಿ ಕೆ. ಅವರು ನೇಮಕಗೊಂಡಿದ್ದಾರೆ.
ಈ ಹಿಂದೆ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ಆರು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ಇವರು, ಸರಕಾರದ ಕಡ್ಡಾಯ ವರ್ಗಾವಣೆ ನಿಯಮದಡಿ ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಅಲ್ಲಿ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕರ್ನಾಟಕ ಸರಕಾರ ನಡೆಸಿದ ಗ್ರೇಡ್-1 ಪ್ರಾಂಶುಪಾಲರ ಲಿಖಿತ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 72ನೇ ರ‍್ಯಾಂಕ್ ಗಳಿಸಿ ಉತ್ತೀರ್ಣರಾಗಿರುವ ಇವರು ಇದೀಗ ಮತ್ತೆ ಸುಳ್ಯ ಕಾಲೇಜಿನ ಪ್ರಾಂಶುಪಾಲರಾಗಿ ಸ್ಥಳನಿಯುಕ್ತಿಗೊಂಡಿದ್ದಾರೆ.








































