ಚೆಂಬು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನವೆಂಬರ್ 29ರಂದು ಚೆಂಬುವಿನ ಕೂಡಡ್ಕದಲ್ಲಿ ನಡೆಯಲಿರುವ ಮೂರನೇ ಅರೆಭಾಷೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಲೀಲಾ ದಾಮೋದರ್ ಅವರನ್ನು ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.
ಅಕಾಡೆಮಿಯ ಪದಾಧಿಕಾರಿಗಳು ಫಲತಾಂಬೂಲ ನೀಡಿ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವಂತೆ ಗೌರವಪೂರ್ವಕವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ, ಸದಸ್ಯರಾದ ಚಂದ್ರಶೇಖರ ಪೇರಾಲು, ಡಾ. ಜ್ಞಾನೇಶ್ ಎನ್.ಎ., ಚಂದ್ರಾವತಿ ಬಡ್ಡಡ್ಕ ಹಾಗೂ ದಾಮೋದರ ಕುಂದಲ್ಪಾಡಿ ಉಪಸ್ಥಿತರಿದ್ದರು.
ಸಮ್ಮೇಳನದ ಅಧ್ಯಕ್ಷರಾಗಿ ಲೀಲಾ ದಾಮೋದರ್ ಅವರ ಆಯ್ಕೆಯೊಂದಿಗೆ ಮೂರನೇ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಮುಂದುವರಿದಿವೆ.








































