ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ರಾಧಾಕೃಷ್ಣರಿಗೆ ಸೇರಿದ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು ಹೋದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.
ಸುಮಾರು ರೂ 1,00,000/- ಮೌಲ್ಯದ ಅಡಿಕೆ, ರಬ್ಬರ್ ಶೀಟುಗಳು ಸುಟ್ಟು ಹೋಗಿರುತ್ತದೆ ಎಂದು ಅಂದಾಜಿಸಲಾಗಿದೆ. ಸುಳ್ಯ ಅಗ್ನಿ ಶಾಮಕ ಸಹಾಯಕ ಠಾಣಾಧಿಕಾರಿ ಕಿರಣ್ ಕುಮಾರ್ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದರು.
ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಭಾರೀ ನಷ್ಟ

















