ಅರಂತೋಡು : ಪೋಷನ್ ಮಾಸಾಚರಣೆ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸುಳ್ಯ ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ಅರಂತೋಡು, ಸ್ತ್ರೀಶಕ್ತಿ ಗೊಂಚಲು ಅರಂತೋಡು,ಸಹಕಾರಿ ಸಂಘ ಅರಂತೋಡು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ 2025 ಕಾರ್ಯಕ್ರಮ ಸೆ.15ರಂದು ನಡೆಯಿತು. ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಸ್ಮಿತಾ ಹರ್ಷವರ್ಧನ್ ಶಿಶು ಮತ್ತು ಮಕ್ಕಳ ಆಹಾರ ಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು , ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಂಯೋಜಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ,ಸಮುದಾಯ ಆರೋಗ್ಯ ಅಧಿಕಾರಿಗಳು, ವಲಯ ಮೇಲ್ವಿಚಾರಕರು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷರು ಭಾಗವಹಿಸಿದ್ದರು.
ಸಮುದಾಯ ಆಧಾರಿತ ಸೀಮಂತ ಅನ್ನಪ್ರಾಶನ ಸುಪೋಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಅರಂತೋಡು ಅಂಗನವಾಡಿ ಕೇಂದ್ರದ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top