ಮಾಜಿ ಹೋಮ್ ಗಾರ್ಡ್ ರೊಬ್ಬರು ಆ್ಯಸಿಡ್ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ವರದಿಯಾಗಿದೆ.
ಪೆರಾಜೆ ಸಮೀಪದ ಅಂಜಿಕಾರ್ ನಿವಾಸಿ ಪ್ರಭಾಕರ ಪೈ (63ವರ್ಷ) ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದರು.ಕಳೆದ ಮೂರು ವರ್ಷದಿಂದ ಕರ್ತವ್ಯದಿಂದ ಹೊರಗಿದ್ದರು ಎಂದು ತಿಳಿದು ಬಂದಿದೆ. ಇವರು ಮುಳುಗು ತಜ್ಞ ಕೂಡ ಆಗಿದ್ದು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ

















