ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಸೆ.24ರಂದು
ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಬೆಂಗಳೂರಿನ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದಾಟು, ಗೃಹಭಂಗ ಮುಂತಾದ ಪ್ರಸಿದ್ದ ಕಾದಂಬರಿಗಳನ್ನು ಬರೆದಿರುವ ಎಸ್.ಎಲ್. ಭೈರಪ್ಪ, ಸರಸ್ವತಿ ಸಮ್ಮಾನ್ ಪ್ರಶಸ್ತಿಗೂ ಭಾಜನರಾಗಿದ್ದರು.2023 ರಲ್ಲಿ ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇಂದು ಮಧ್ಯಾಹ್ನ 2.38 ಗಂಟೆಗೆ ಹೃದಯಾಘಾತದಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ಭೈರಪ್ಪ ಮೃತಪಟ್ಟಿದ್ದಾರೆ.
ಹಿರಿಯ ಸಾಹಿತಿ ಎಸ್.ಎಲ್ ಬೈರಪ್ಪ ವಿಧಿವಶ

















