ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಅಪ್ರಾಪ್ತ ಯುವತಿಯೊಬ್ಬಳನ್ನು ಗರ್ಭಿಣಿಯನ್ನಾಗಿಸಿದ ಯುವಕ ಜೈಲಿಗೆ ಹೋಗುತ್ತಿದ್ದಂತೆ ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ.
ನಾಲ್ಕೂರು ಗ್ರಾಮದ ಯುವತಿಯೊಬ್ಬಳು ಗುತ್ತಿಗಾರಿನಲ್ಲಿ ರೂಂ ಪಡೆದು ವಾಸವಿದ್ದು, ಬಾಳುಗೋಡು ಗ್ರಾಮದ ಬೆಟ್ಟುಮಕ್ಕಿಯ ಯುವಕನೊಬ್ಬ ಈಖೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭವತಿಯನ್ನಾಗಿಸಿದ್ದ. ಯುವತಿಗೆ ಒಂಬತ್ತು ತಿಂಗಳಾಗುತ್ತಿದ್ದಂತೆ ಪ್ರಕರಣ ಬಯಲಿಗೆ ಬಂದಿದ್ದು, ಈ ಸಂಬಂಧ ಬಾಳುಗೋಡಿನ ಯುವಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಅಪ್ರಾಪ್ತ ಯುವತಿಯನ್ನು ಗರ್ಭಿಣಿಯಾಗಿಸಿದ ಯುವಕ ಜೈಲಿಗೆ ಹೋಗುತ್ತಿದ್ದಂತೆ ಇತ್ತ ಮಗುವಿಗೆ ಜನ್ಮ ನೀಡಿದ ಯುವತಿ

















