ಸುಳ್ಯ ದಸರಾ ಯಾವುದೇ ವಿಘ್ನವಿಲ್ಲದೆ ಯಶಸ್ವಿಯಾಗಿ ನಡೆಯಲಿ ಎಂದು ಸುಳ್ಯ ಚೆನ್ನಕೇಶವ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಶುಭ ಹಾರೈಸಿದರು.
ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ 54ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರವನ್ನು ಸುಳ್ಯದ ದಸರಾ ಸಾಂಸ್ಕೃತಿಕ ವೇದಿಕೆಯಲ್ಲಿ ಅವರು
ಉದ್ಘಾಟಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಮಾಧವ ಗೌಡರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಮ್ಮ ಹಬ್ಬ ಆಚರಣೆಗಳಿಗೆ ವಿಶೇಷತೆ ಇದೆ.ಧಾರ್ಮಿಕ ಕಾರ್ಯಕ್ರಮಗಳು ನಮ್ಮಲ್ಲಿ ಒಗ್ಗಟ್ಟನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ಸುಳ್ಯ ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಕಾರ್ಯದರ್ಶಿ ಎಂ.ಕೆ.ಸತೀಶ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ಸುನಿಲ್ ಕೇರ್ಪಳ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಡಾ.ಯಶೋಧಾ ರಾಮಚಂದ್ರ, ಅಧ್ಯಕ್ಷೆ ಲತಾ ಮಧುಸೂದನ್, ಕಾರ್ಯದರ್ಶಿ ಶ್ವೇತಾ ಪ್ರಶಾಂತ್ ವೇದಿಕೆಯಲ್ಲಿದ್ದರು.
ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಜು ಪಂಡಿತ್ ವಂದಿಸಿದರು.
.



































