2025ರ ಮಹಿಳಾ ಏಕದಿನ ವಿಶ್ವಕಪ್‌ನ 6ನೇ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 88 ರನ್‌ಗಳ ಅಂತರದಿಂದ ಸೋಲಿಸಿದೆ. ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡಿದ ಭಾರತ 247 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 43 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಭಾರತ ತಂಡ ವಿಶ್ವಕಪ್‌ನಲ್ಲಿ ತನ್ನ ಎರಡನೇ ವಿಜಯವನ್ನು ದಾಖಲಿಸಿದೆ, ಆದರೆ ಪಾಕಿಸ್ತಾನ ತಂಡ ಆಡಿದ ಎರಡು ಪಂದ್ಯಗಳಲ್ಲೂ ಸೋಲು ಅನುಭವಿಸಿದೆ.
ಪಾಕಿಸ್ಥಾನವನ್ನು ಹೀನಾಯವಾಗಿ ಸೋಲಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ



































