ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಅ.8 ರಂದು ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಂಘದ ವತಿಯಿಂದ ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಅವರನ್ನು ಸನ್ಮಾನಿಸಲಾಯಿತು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ,ತೇಜೇಶ್ವರ್ ಕುಂದಲ್ಪಾಡಿ,ಮಣಿಪಾಲ್ ಆಸ್ಪತ್ರೆಯ ಪಿ.ಆರ್.ಒ ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ದಯಾನಂದ ಕಲ್ನಾರ್ ಸ್ವಾಗತಿಸಿ, ಮಿಥುನ್ ಕರ್ಲಪ್ಪಾಡಿ ವಂದಿಸಿದರು.
0



































