ತಲಕಾವೇರಿ ದೇವಾಲಯದಲ್ಲಿ“ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಅಕ್ಟೋಬರ್, 17 ರಂದು ಮಧ್ಯಾಹ್ನ 01: 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆಗಮಿಸುತ್ತಾಳೆ. ಈ ವರ್ಷ ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆಯಿರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದೆ.
ಅ.17 ರಂದು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ



































