ರಾಜ್ಯದಲ್ಲಿ ಬಿಸಿಯೂಟಕ್ಕೆ ಬಳಸುವ ಆಲ್ಯೂಮಿನಿಯಂ ಪಾತ್ರೆ ನಿಷೇಧಿಸಲು ರಾಜ್ಯ ಸರಕಾರ ನಿರ್ಧಾರ

ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಅಡುಗೆಗೆ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವತ್ತ ರಾಜ್ಯ ಸರಕಾರ ನಿರ್ಧಾರಕ್ಕೆ ಬಂದಿದೆ.
ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.
ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.
ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.
ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಶಾಲೆಗಳಲ್ಲಿ ಆಹಾರವನ್ನು ತಯಾರಿಸುವಾಗ ಅಲ್ಯುಮಿನಿಯಂ ಪಾತ್ರೆಗಳನ್ನು ದೀರ್ಘಾವಧಿಯಲ್ಲಿ ಬಳಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಅಲ್ಯುಮಿನಿಯಂ ಪಾತ್ರೆಗಳ ಬಳಕೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top