ಮಾರಿಷಸ್ ನಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಲ್ಲುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದಾರೆ.
ಮೃತದೇಹ ವನ್ನು ಊರಿಗೆ ತರುವ ನಿಟ್ಟಿನಲ್ಲಿ ಸಂಸದರು ಮಧ್ಯ ಪ್ರವೇಶಿಸಿ ಪ್ರಯತ್ನ ನಡೆಸುತ್ತಿದ್ದಾರೆ.
ಕಲ್ಲಾಜೆಯ ಜಯಲಕ್ಷ್ಮಿ ಭಟ್ ಎಂಬವರ ಪುತ್ರರಾಗಿರುವ ನಂದನ್ ಎಸ್. ಭಟ್ ಅವರು ಮಾರಿಷಸ್ ನಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಅಧ್ಯಯನ ನಡೆಸುತ್ತಿದ್ದರು. ಭಾನುವಾರ ಜಲಪಾತ ವೀಕ್ಷಣೆಗೆಂದು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವರಿಗೆ 26 ವರ್ಷ ವಯಸ್ಸಾಗಿತ್ತು. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಮಾರಿಷಸ್ ನಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಯುವಕ ಜಲಪಾತದ ನೀರಲ್ಲಿ ಮುಳುಗಿ ಸಾವು



































