ಕರ್ನಾಟಕದಲ್ಲಿ ತಾಲೂಕು ಪಂಚಾಯತ್,ಜಿಲ್ಲಾ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಿನ ತಿಂಗಳ ಒಳಗಾಗಿ ನಡೆಯುಲಿದೆ ಎಂದು ಮಾಹಿತಿ ಲಭ್ಯವಾಗಿದೆ.ನಾಲೈದು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೇ ಸೊರಗಿದ್ದ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಬೃಹತ್ ಬೆಂಗಳೂರು ಪಾಲಿಕೆಯ ಐದು ಉಪಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಮುಂದಿನ ಚುನಾವಣೆಗೆ ಸಜ್ಜಾಗಲು ಸೂಚನೆ ನೀಡಿದ್ದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಸೂಚನೆ ನೀಡಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮುಂದಿನ ಐದರಿಂದ ಆರು ತಿಂಗಳೊಳಗೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವುದು ಖಚಿತವಾಗಿದೆ
ಮುಂದಿನ ಆರು ತಿಂಗಳ ಒಳಗಾಗಿ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಾಧ್ಯತೆ

















