ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕೆ.ವಿ.ಜಿ.ಸಮುದಾಯ ಭವನ ಅಮರಶ್ರೀಭಾಗ್ ನಲ್ಲಿ .ಅ 18ರಂದು ನಡೆಯಿತು.
ಡಾ.ರೇಣುಕಾ ಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌.
ಅವರು ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿ ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.
ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ ಬಿಯ ಪ್ರಧಾನ ಕಾರ್ಯದರ್ಶಿ ಡಾ.ಜ್ಯೋತಿ ಆ‌ರ್ ಪ್ರಸಾದ್‌, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್ ಮನ್ಮಥ, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎ.ರಾಮಚಂದ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಮೋಹನ್ ರಾಯ್ ಸುಳ್ಳಿ, ಪ್ರಸ್ತುತ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾ ಮನಮೋಹನ್, ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕಾಧ್ಯಕ್ಷರಾದ ಪಿ.ಸಿ.ಜಯರಾಮ್ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top