ನ.10ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರಿಂದ ಬೆಳ್ಳಿ ರಥ ಸಮರ್ಪಣೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡುವ ಯೋಗಭಾಗ್ಯ ನಮಗೆ ಒದಗಿ ಬಂದಿದ್ದು ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಲಾಗುವುದು ಎಂದು ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ.ಹೇಳಿದರು.
ಅವರು ಕೆವಿಜಿ ಡೆಂಟಲ್ ಕಾಲೇಜು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಈಗಾಗಲೇ ಬೆಳ್ಳಿ ರಥ ನಿರ್ಮಾಣ ಅಂತಿಮ ಹಂತದಲ್ಲಿದ್ದು ನ.3ರಂದು ಕೋಟೇಶ್ವರದಿಂದ ಬೆಳ್ಳಿ‌ರಥ ಹೋರಟು
ನ.10ರಂದು ಶಾಸ್ರೋಕ್ತವಾಗಿ ಸಮರ್ಪಣೆ ಮಾಡಲಾಗುತ್ತದೆ.
ನ.9 ರಂದು ಸಂಜೆ 6ರಿಂದ ವಾಸ್ತು ರಕ್ಷೆಹ್ನೋಹೋಮ ಶುದ್ದಿ ಕಲಶ, ವಾಸ್ತು ಬಲಿ ಮತ್ತು ವಾಸ್ತು ಪೂಜೆ ನಡೆಯಲಿದೆ.
ನ.10ರಂದು ಬೆಳಗ್ಗೆ 7ರಿಂದ ಸುಬ್ರಹ್ಮಣ್ಯ ಹೋಮ, ಪವಮಾನ ಹೋಮ ಪೂರ್ವಾಹ್ನ ಗಂಟೆ 11ಕ್ಕೆ ಪೂರ್ಣಾಹುತಿಗೊಂಡು, ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ನಡೆಯಲಿದೆ.
ಅದೇ ದಿನ ರಾತ್ರಿ ನಮ್ಮ ಹೆಸರಲ್ಲಿ ಪ್ರಥಮ ಬೆಳ್ಳಿರಥ ಸೇವೆಯನ್ನು ನೆರವೇರಿಸಲು ನಿಶ್ಚಯಿಸಲಾಗಿದೆ ಎಂದು ತಿಳಿಸಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡುವ ಮೊದಲು ರಥ ಶಿಲ್ಪಿ ಕೋಟೇಶ್ವರ ಬಿ.ಲಕ್ಷ್ಮೀ ನಾರಾಯಣ ಆಚಾರ್ಯರು ಮತ್ತು ಪುತ್ರ ರಾಜಗೋಪಾಲ ಆಚಾರ್ಯರು ನಿರ್ಮಿಸಿಕೊಟ್ಟ ಬೆಳ್ಳಿರಥಕ್ಕೆ ಗುತ್ತಿಪೂಜೆ ನಡೆಯಲಿದೆ.
ಬಳಿಕ ಶಾಸ್ತೋಕ್ತವಾಗಿ ರಥ ಬಿಟ್ಟುಕೊಡುವ ಕಾರ್ಯಕ್ರಮ ನ.3ರಂದು ರಾತ್ರಿ ನಡೆಯಲಿದೆ. ನ.4ರಂದು ಬೆಳಿಗ್ಗೆ 8ಕ್ಕೆ ಬೆಳ್ಳಿರಥ ಯಾತ್ರೆಗೆ ಚಾಲನೆ ದೊರೆಯಲಿದೆ. ಕುಂಭಾಶಿ-ಉಡುಪಿ- ಸುರತ್ಕಲ್- ಮಂಗಳೂರು- ಬಿಸಿ ರೋಡ್-ಕಬಕ-ಪುತ್ತೂರು- ಕುಂಬ್ರ- ಕನಕಮಜಲು- ಜಾಲ್ಕೂರು ಪೈಚಾರ್ ಮೂಲಕ ಸಾಗಿ ಬಂದು ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಸ್ವಾಗತವನ್ನು ಸ್ವೀಕರಿಸಿ ಸಂಜೆ ಸುಳ್ಯಕ್ಕೆ ಆಗಮಿಸಲಿದೆ. ಪೈಚಾರು ಬಳಿ ಪೂರ್ಣಕುಂಭದ ಮೂಲಕ ಸ್ವಾಗತಿಸಲಾಗುತ್ತದೆ. ಸಿಂಗಾರಿಮೇಳ, ಭಜನಾ ತಂಡ ಹಾಗೂ ವಿವಿಧ ಸಾಂಸ್ಕೃತಿಕ ವೈಭವದೊಂದಿಗೆ ಭವ್ಯವಾದ
ಮೆರವಣಿಗೆ ಮೂಲಕ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರಕ್ಕೆ ರಥ ಆಗಮಿಸಲಿದೆ.
ಬಳಿಕ ಅಮರಶ್ರೀ ಕಾಂತಮಂಗಲದ ಮೂಲಕ ಹಾದು ಹೋಗಿ ಶ್ರೀ ಕ್ಷೇತ್ರ ಗುತ್ಯಮ್ಮನ ಸನ್ನಿಧಿಯಲ್ಲಿ ರಾತ್ರಿ ತಂಗಲಿದೆ. ನ.5ರಂದು ಪೂ.8ರಂದು ಶ್ರೀ ಗುತ್ಯಮ್ಮ ಕ್ಷೇತ್ರದಿಂದ ಹೊರಟು ಬೆಳ್ಳಿರಥ ಯಾತ್ರೆ ಕೆವಿಜಿ ಸರ್ಕಲ್ ಬಳಿಯಿಂದ ವಿವಿಧ ವೈಧಿಕ ಮತ್ತು ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೊರಡಲಿದೆ. ಸಿಂಗಾರಿ ಮೇಳ, ಭಜನಾ ತಂಡಗಳು, ಚೆಂಡೆ ವಾದ್ಯ ಮೇಳಗಳು, ಸ್ಯಾಕ್ರೋಫೋನ್, ಚೆಂಡೆ ವಾದ್ಯ ಮೇಳಗಳು ಮೆರವಣಿಗೆಗೆ ರಥ ಯಾತ್ರೆಗೆ ವಿಶೇಷ ಮೆರುಗು ನೀಡಲಿವೆ.
ವಿವಿಧ ಧಾರ್ಮಿಕ ಕ್ಷೇತ್ರಗಳ ಹಾಗೂ ವಿವಿಧ ಗ್ರಾಮಗಳ ಭಕ್ತರ ಸ್ವಾಗತದೊಂದಿಗೆ ವೈಭವದ ಬೆಳ್ಳಿರಥ ಯಾತ್ರೆ ಮುಂದುವರಿದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತಲುಪಲಿದೆ. ರಥ ಸಮರ್ಪಣೆ ಸಂದರ್ಭದಲ್ಲಿ ಮತ್ತು ರಥಯಾತ್ರೆ ಸಂದರ್ಭದಲ್ಲಿ ಭಕ್ತರಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ವಿನಂತಿಸಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆ, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ
ಪ್ರಾಂಶುಪಾಲ, ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತಾಧಿಕಾರಿ ಮಾಧವ ಬಿ.ಟಿ, ದಿನೇಶ್ ಮೆಡ್ತಿಲ ಕಮಲಾಕ್ಷ ನಂಗಾರು, ಜಯಂತ ತಳೂರು ಇತರರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top