ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿ ಕಾಮಗಾರಿ ನಡೆಯದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಟ್ಟಡದ ಸ್ಥಳಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯರವರು ಅಕ್ಟೋಬರ್ ೨೭ರಂದು ಭೇಟಿ ನೀಡಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವೀಕ್ಷಣೆ ನಡೆಸಿದರು.
ಸಂದರ್ಭದಲ್ಲಿ ಶಾಸಕರೊಂದಿಗೆ ಇದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಂಜಿನಿಯರ್ ಹಾಗೂ ಗುತ್ತಿಗೆದಾರರಲ್ಲಿ ಮುಂದಿನ ಕಾಮಗಾರಿಗೆ ಬೇಕಾಗಿರುವ ಎಸ್ಟಿಮೇಟ್ ಕೂಡಲೇ ತಯಾರಿಸಿ ಕೊಡುವ ಕುರಿತು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳಾದ ಎಸ್.ಎನ್. ಮನ್ಮಥ, ಶುಭೋದ್ ಶೆಟ್ಟಿ ಮೇನಾಲ, ಚನಿಯ ಕಲ್ತಡ್ಕ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ, ಲೋಕೋಪಯೋಗಿ ಇಲಾಖೆಯ ಎಇಇ ಗೋಪಾಲ ಕೆ., ಎಇ ಪರಮೇಶ್ವರ್, ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗದ ಎಇಇ ಫಯಾಜ್ ಅಹಮದ್, ಎಇ ಮಣಿಕಂಠನ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನಂದಿನಿ ಹಾಗೂ ಸ್ಮಿತಾ ಉಪಸ್ಥಿತರಿದ್ದರು.
ಕಾಮಗಾರಿ ನಡೆಯದೆ ನೆನೆಗುದಿಗೆ ಬಿದ್ದ ನಿರ್ಮಾಣ ಹಂತದ ಅಂಬೇಡ್ಕರ್ ಭವನ ಕಾಮಗಾರಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

























































