ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕಡಬ ತಾಲೂಕಿನ ಸವಣೂರು ಸಮೀಪದ ಕುದ್ಮಾರು ನಿವಾಸಿ ಕಾರ್ತಿಕ್(23) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉದ್ಯೋಗದ ಸಂದರ್ಶನ ಮುಗಿಸಿ ಉದ್ಯೋಗಕ್ಕೆ ಆಯ್ಕೆಯಾಗಿ ಮಂಗಳೂರಿನಿಂದ ಸವಣೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಭೀಕರ ಕಾರು ಅಪಘಾತದಲ್ಲಿ ಕುದ್ಮಾರಿನ ಯುವಕ ಸಾವು

















