ಸುಳ್ಯದಲ್ಲಿ ನಾಳೆಯಿಂದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೈಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ 2025 ನ. 7 ರಿಂದ ನ.9ರ ವರೆಗೆ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಭಾರತೀಯ ವೈಟ್ ಲಿಫ್ಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಆನಂದೇ ಗೌಡ ತಿಳಿಸಿದರು.
ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಸಂಘಟನಾ ಸಮಿತಿ ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ೨೦೨೫-೨೬ ಮೂರು ದಿನ ನಡೆಯಲಿದೆ. ಈ ಹಿಂದೆ ಮೈಸೂರು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಪಂದ್ಯಾಟ ನಡೆಯುತ್ತಿತ್ತು ಆದರೆ ಇದೀಗ ಗ್ರಾಮೀಣ ಭಾಗವಾದ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ನಡೆಯತಿದ್ದು ಸುಮಾರು ೩೫೦ ಸ್ಪರ್ಧಿಗಳು ೮ ವಿಭಾಗಗಳಲ್ಲಿ ಭಾಗವಹಿಸಲಿದ್ದಾರೆ.
೧೩ ರಿಂದ ೧೭ ವಯಸ್ಸಿನ ಜೂನಿಯರ್ ವಿಭಾಗ ಸೇರಿದಂತೆ ಸಬ್ ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ಪಂದ್ಯಾಟದಲ್ಲಿ ಸುಳ್ಯದ ೧೦ ಮಂದಿ ಭಾಗವಹಿಸಲಿದ್ದಾರೆ ಎಂದು ಸ್ಪೋರ್ಟ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಕಾರ್ಯದರ್ಶಿ ಎ. ರಮೇಶ್ ತಿಳಿಸಿದರು.
ನ. ೮ ರಂದು ಬೆಳಿಗ್ಗೆ ಪಂದ್ಯಾಟದ ಉದ್ಘಾಟನೆಯ ನಡೆಯಲಿದ್ದು ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ವೈಟ್ ಲಿಫ್ಟರ್ ಸಂಸ್ಥೆಯ ಅಧ್ಯಕ್ಷ ದಯಾನಂದ ಪೈ, ಪ್ರಧಾನ ಕಾರ್ಯದರ್ಶಿ ಆನಂದೇ ಗೌಡ ಮಾಜಿ ಅಂತರಾಷ್ಟಿಯ ವೈಟ್ ಲಿಫ್ಟರ್ ಆರ್ಥರ್ ಡಿಸೋಜಾ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್, ಸುಳ್ಯ ತಹಶೀಲ್ದಾರ್ ಮಂಜುಳಾ, ಸುಳ್ಯ ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ ರೈ, ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸದಸ್ಯೆ ಕಿಶೋರಿ ಶೇಟ್, ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರಧ್ವಜ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ.ವಿ, ಖಜಾಂಜಿ ಕೆ. ಅಶೋಕ್ ಪ್ರಭು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸ್ಪೋರ್ಟ್ ಆಂಡ್ ಆರ್ಟ್ಸ್ ಎಸೋಸಿಯೇಶನ್ ಎನ್. ಜಯಪ್ರಕಾಶ್ ರೈ, ರಾಧಾಕೃಷ್ಣ ಮಾಣಿಬೆಟ್ಟು, ಸಂಘಟನಾ ಸಮಿತಿ ಕಾರ್ಯದರ್ಶಿ ಸುನೀಲ್ ಕೇರ್ಪಳ, ಗೋಕುಲ್ ದಾಸ್, ಬೂಡು ರಾಧಾಕೃಷ್ಣ ರೈ, ಭವಾನಿಶಂಕರ್ ಕಲ್ಮಡ್ಕ, ಜನಾರ್ಧನ ದೋಳ, ಕಿರಣ್ ಕುರುಂಜಿ, ಕಿಶೋರಿ ಶೇಟ್, ಲತಾ ಮಧುಸೂದನ್, ನಮಿತಾ ರಾವ್, ರವಿಚಂದ್ರ ಕೊಡಿಯಾಲಬೈಲು, ಸುಜತಾ, ಉಷಾ ಜೆ. ಕೆ, ತಿಲಕ, ನವೀನ್ ಆರ್ತಾಜೆ ಮೊದಲಾದವರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top