ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.
ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.
ಸುಮಾರು ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಪುಷ್ಪರಾಜ್ 1990-91ರಿಂದ ಸಾಕ್ಷರತಾ ಚಟುವಟಿಕೆ, ಶೈಕ್ಷಣಿಕ ಜಾಗೃತಿಯೊಂದಿಗೆ ಮಾಧ್ಯಮ ರಂಗದ ಮೂಲಕ ಪುತ್ತೂರು ತಾಲೂಕು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಕ್ರಿಯರಾಗಿದ್ದರು. ಬಳಿಕ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯಕಾರಿ ಸಮಿತಿ ಸದಸ್ಯ, ಕೋಶಾಧಿಕಾರಿ ಸಹಿತ ವಿವಿಧ ಜವಾಬ್ದಾರಿಯನ್ನು ನಿಭಾಯಿಸಿದ್ದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

















